ಮಂಗಳೂರು,ಜ.01 : ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ ಅವರು ಇಂದು ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ವಿನಯ ಹೆಗ್ಡೆ ಅವರು ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ ರಾಗಿರುತ್ತಾರೆ. ವಿನಯ ಹೆಗ್ಡೆ ಅವರು 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದರು. ಮಂಗಳೂರಿನ ನಿಟ್ಟೆ ಶಿಕ್ಷಣ ಸಂಸ್ಥೆಗಳು ಬೆಂಗಳೂರು ಮತ್ತು ನಿಟ್ಟೆಯಲ್ಲಿ ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ.
ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.











