ಬೆಳ್ತಂಗಡಿ, ಜ. 10 : ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ.ಸ್ಥಳೀಯ ನಿವಾಸಿಗಳು ಮತ್ತು ಅಗ್ನಿಶಾಮಕ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಲಾರಿ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ವರದಿಯಾಗಿದೆ.
ಜಾವಗಲ್ ನಿಂದ ಕುಂದಾಪುರಕ್ಕೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ಮೂಲಕ ಹಾದುಹೋಗುವಾಗ ತಾಂತ್ರಿಕ ದೋಷದಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.
ಲಾರಿಯಲ್ಲಿದ್ದ ಚಾಲಕ ಮತ್ತು ವಾಹನದಲ್ಲಿದ್ದ ಇಬ್ಬರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.











