ಕಾರ್ಕಳ, ಜ. 16 : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯ ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು,ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್ ವಿದ್ಯುತ್ ಉಪಕರಣಗಳು ಸೇರಿ ಹಲವು ಸೊತ್ತುಗಳು ಹಾನಿಗೊಳಗಾಗಿದೆ.
ಘಟನೆಯಲ್ಲಿ ಮನೆ ಮಂದಿ ಪಾರಾಗಿದ್ದಾರೆ ಯಾರಿಗೂ ಗಾಯಗಳಾಗಿಲ್ಲ. ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸುಮಾರು 3 ಲಕ್ಷ ರೂ. ನಷ್ಟವಾಗಿದೆ ಎಂದು ವರದಿಯಾಗಿದೆ.











