ಹಳೆಯಂಗಡಿ, ಫೆ. 10 : ಸಸಿಹಿತ್ಲುವಿನ ಶ್ರೀ ಭಗವತೀ ದೇವಸ್ಥಾನದಲ್ಲಿ ಮಾ.4ರಿಂದ ಮಾ.8ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಭಾನುವಾರ ನಡೆಯಿತು.
ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಾಮನ್ ಇಡ್ಯಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಬೆಲ್ಮಡ, , ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಾದ ಸುನೀಲ್ ಆಳ್ವ,ದಿವಾಕರ ಸಾಮಾನಿ,ಕಸ್ತೂರಿ ಪಂಜ,ಚಂದ್ರ ಶೇಖರ ನಾನಿಲ್,ಗೀತಾ ಪಿ ಕುಮಾರ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಉದಯ ಸುವರ್ಣ ಅಗ್ನಿದ ಕಳಿಯ, ವಿನೋದ್ ಸಾಲ್ಯಾನ್ ಬೆಳ್ಳಾಯರು,ವಿನೋದ್ ಬೋಳೂರು ದಿನಕರ ಎಸ್. ಹಳೆಯಂಗಡಿ, ಗೀತಾಂಜಲಿ ಸುವರ್ಣ,ಕಿರಣ್ ಗುರಿಕಾರ ಮೊದಲಾದವರು ಉಪಸ್ಥಿತರಿದ್ದರು.
ರಾಜೇಂದ್ರ ಪ್ರಸಾದ್ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.











