ಉಪ್ಪಿನಂಗಡಿ, ಫೆ. 13 : ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಬುಧವಾರ ನಡೆದಿದೆ.
ಮೃತರನ್ನು ಅಳಕ್ಕೆ ನಿವಾಸಿ ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32) ಎಂದು ಗುರುತಿಸಲಾಗಿದೆ.
ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಮೇಲ್ಭಾಗದ ರಸ್ತೆ ಯಿಂದ ಕೆಳಭಾಗದ ರಸ್ತೆಗೆ ಪಲ್ಟಿಯಾಗಿ ವಾಹನದಲ್ಲಿದ್ದ ಹೇಮಚಂದ್ರ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಮ್ಮರಬ್ಬ (51) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











