ಸುಳ್ಯ , ಮಾ. 02 : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಅವರು ಕುಣಿತ ಭಜನೆ ಮಾಡುತ್ತಾ ಇದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಭಜನ ಮಂಡಳಿಯ ಸದಸ್ಯೆ ರತ್ನಾವತಿ ಕುಸಿದು ಬಿದ್ದ ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಯಿತಾದರೂ,ಅಲ್ಲಿಗೆ ತಲುಪುವ ಮೊದಲೇ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.











