ಬೆಂಗಳೂರು, ,ಮಾ. 06 : ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ತೊಗರಿಬೇಳೆ, ಉಪ್ಪು, ಸಕ್ಕರೆ, ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಸಿಎಂ, ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗಾಗಿ ಒಟ್ಟು 17,167 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.
ಪ್ರಸ್ತುತ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಪ್ರತಿ ತಿಂಗಳು ಪೌಷ್ಟಿಕಾಂಶವುಳ್ಳ ತೊಗರಿಬೇಳೆ, ಉಪ್ಪು ,ಸಕ್ಕರೆ ಮತ್ತು ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈ ಸಾಲಿನಲ್ಲಿ 6,200 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು.











