ವಿಟ್ಲ: ಸೈಕಲ್ ನಿಂದ ಬಿದ್ದ ಬಾಲಕನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಬಾಲಕನನ್ನು ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಎಂದು ಗುರುತಿಸಲಾಗಿದೆ
ಸ್ಥಳೀಯರ ಮಾಹಿತಿ ಪ್ರಕಾರ, ಆಸೀಪ್ ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಸೈಕಲ್ನಲ್ಲಿ ಹಿಂತಿರುಗುವ ಸಂದರ್ಭ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸೈಕಲ್ನಿಂದ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಆಸಿಫ್ ಕೊಳ್ನಾಡು ಗ್ರಾಮದ ತಾಳಿತ್ತನೂಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಯಾಗಿದ್ದರು.











