ಬೆಳ್ತಂಗಡಿ,ಮಾ.17 : ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ.
ಆದೇಶದಂತೆ, 6 ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಾರ್ಚ್ 16ರಂದು ಆದೇಶ ಹೊರಡಿಸಿದ್ದಾರೆ.ಗಡಿಪಾರು ಅವಧಿಯು ಮಾರ್ಚ್16ರಿಂದ ಸೆಪ್ಟಂಬರ್ 16ರವರೆಗೆ 6 ತಿಂಗಳು ಕಾಲಾವಧಿಯನ್ನು ಹೊಂದಿದೆ .
ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಈ ಹಿಂದೆ ಎರಡನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದಾಗ, ಅವರು ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು, ಆದೇಶವನ್ನು ಮರುಪರಿಶೀಲಿಸುವಂತೆ ಪುತ್ತೂರು ಎಸಿಗೆ ಸೂಚಿಸಿತ್ತು. ಹೊಸ ಆದೇಶ ಹೊರಡಿಸಲು 3 ವಾರಗಳ ಕಾಲಾವಕಾಶ ನೀಡಿತ್ತು. ಹೈಕೋರ್ಟ್ ನೀಡಿದ್ದ ಗಡುವಿನ ಹಿನ್ನೆಲೆಯಲ್ಲಿ ಈಗ ಮರುಪರಿಶೀಲನೆ ನಡೆಸಿ ಮೂರನೇ ಬಾರಿ ಈ ಆದೇಶ ಹೊರಡಿಸಲಾಗಿದೆ.










