ಕಾರ್ಕಳ, ಮಾ. 21 : ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳದ ಪಳ್ಳಿ ಅಡಪಾಡಿ ಬಳಿ ಗುರುವಾರ ನಡೆದಿದೆ.
ಮೃತರನ್ನು ಹಿರಿಯಡ್ಕ ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ.
ಗಣೇಶ್ ನಾಯಕ್ ಅವರು ತಮ್ಮ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಬೈಕ್ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು,ತೀವ್ರವಾಗಿ ಗಾಯಗೊಂಡು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











