Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    May 30, 2026

    ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

    May 29, 2026

    ಜೂನ್ 4, 13 : ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ವತಿಯಿಂದ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿ

    May 29, 2026

    Subscribe to Updates

    Get the latest creative news from FooBar about art, design and business.

    What's Hot

    ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    May 30, 2026

    ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

    May 29, 2026

    ಜೂನ್ 4, 13 : ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ವತಿಯಿಂದ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿ

    May 29, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರಿನ ಪುರಭವನದಲ್ಲಿ ಏಪ್ರಿಲ್ 12 ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ
    Local News

    ಮಂಗಳೂರಿನ ಪುರಭವನದಲ್ಲಿ ಏಪ್ರಿಲ್ 12 ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    adminBy adminApril 10, 2026
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಏ. 10 : ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಏಪ್ರಿಲ್ 12, ಭಾನುವಾರ ಬೆಳಿಗ್ಗೆ 9 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಬಹಿರಂಗ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ನಗರದ ಬಂಟ್ಸ್ ಹಾಸ್ಟೇಲ್ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ಮಾನ್ಯ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ ಸವಣೂರು ಹಾಗೂ ರಾಜೇಶ್ ರೈ ಕಲ್ಲಂಗಳ ಅವರು ಭಾಗವಹಿಸಲಿದ್ದಾರೆ. ಕೊಡ್ಮಾನ್ ಮೋಹನದೇವ್ ಆಳ್ವ ಮತ್ತು ಡಾ. ಎಮ್. ಕೆ. ಶೈಲಜಾ ಆಳ್ವ ಅವರು ಉಪಸ್ಥಿತರಿರುವರು ಎಂದರು.

    ಡಾ. ಕೊಡ್ಮಾನ್ ನಾಗಪ್ಪ ಆಳ್ವ ಮತ್ತು ಶ್ರೀಮತಿ ಕಲ್ಯಾಣಿ ಆಳ್ವ ಇವರ ಸ್ಮರಣಾರ್ಥವಾಗಿ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.ವೈದ್ಯಕೀಯ ಕ್ಷೇತ್ರದಲ್ಲಿ ನಿಟ್ಟೆ ವಿ.ವಿ.ಯ ಉಪಾಧ್ಯಕ್ಷ ಡಾ. ಸತೀಶ್ ಭಂಡಾರಿ, ಶೈಕ್ಷಣಿಕ ಕ್ಷೇತ್ರದಲ್ಲಿ ಬೆಂಗಳೂರು ಪಶು ವೈದ್ಯಕೀಯ ವಿ.ವಿ.ಯ ಮಾಜಿ ಡೀನ್ ಪ್ರೊ. ವಸಂತ್ ಶೆಟ್ಟಿ ಮುಳ್ಳಾಡ್, ಸಾಹಿತ್ಯ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಕೆ. ಉಷಾ ಪಿ. ರೈ, ಸಂಗೀತ ಕ್ಷೇತ್ರದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಶೆಟ್ಟಿ, ನೃತ್ಯ ಕ್ಷೇತ್ರದಲ್ಲಿ ಕರ್ನಾಟಕ ಕಲಾಶ್ರೀ ಪುರಸ್ಕೃತ ವಿದುಷಿ ನಯನ ವಿ. ರೈ ಕುಧ್ಕಾಡಿ, ದೇಶ ಸೇವೆ ವಿಭಾಗದಲ್ಲಿ ನಿವೃತ್ತ ಸೇನಾಧಿಕಾರಿ ಲೆ. ಕ. ಅಜಿತ್ ಕುಮಾರ್ ಶೆಟ್ಟಿ, ಕ್ರೀಡಾ ಕ್ಷೇತ್ರದಲ್ಲಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ಕಬಡ್ಡಿ ಆಟಗಾರ ಪ್ರಶಾಂತ್ ರೈ ಪುತ್ತೂರು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಈಜುಪಟು ಚಿಂತನ್ ಎಸ್. ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.

    ಕೈಗಾರಿಕಾ ಕ್ಷೇತ್ರದಲ್ಲಿ ಮುಂಬೈನ ವಿಶ್ವಾಸ್ ಕೆಮಿಕಲ್ಸ್ನ ಆಡಳಿತ ನಿರ್ದೇಶಕ ವಿವೇಕ್ ಶೆಟ್ಟಿ ಬೊಳ್ಯಗುತ್ತು ಹಾಗೂ ಕೈಗಾರಿಕೋದ್ಯಮಿ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರನ್ನು ಗೌರವಿಸಲಾಗುವುದು. ಸಾಂಸ್ಕೃತಿಕ ಕ್ಷೇತ್ರಕ್ಕೆ ಮುಂಬೈನ ಚಿಣ್ಣರ ಬಿಂಬದ ಸ್ಥಾಪಕ ಪ್ರಕಾಶ್ ಭಂಡಾರಿ, ಧಾರ್ಮಿಕ ಕ್ಷೇತ್ರಕ್ಕೆ ಕುಂಬ್ಳೆಯ ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರ ಶ್ರೀ ಕೆ. ಕೆ. ಶೆಟ್ಟಿ ಕುತ್ತಿಕಾರ್ ಹಾಗೂ ಸಹಕಾರಿ ಕ್ಷೇತ್ರಕ್ಕೆ ಉಡುಪಿಯ ಸಹಕಾರಿ ಧುರೀಣ ಡಾ. ದೇವಪ್ರಸಾದ್ ಶೆಟ್ಟಿ ಬೆಳಪು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

    ಅದೇ ರೀತಿ ಆತಿಥ್ಯ ಉದ್ಯಮದಲ್ಲಿ ಥಾಣೆಯ ವೇಣುಗೋಪಾಲ ಎಲ್. ಶೆಟ್ಟಿ, ನಿರ್ಮಾಣ ಕ್ಷೇತ್ರದಲ್ಲಿ ಮಂಗಳೂರಿನ ಮುಗ್ರೋಡಿ ಸುಧಾಕರ ಶೆಟ್ಟಿ, ಸಂಶೋಧನೆಯಲ್ಲಿ ಶ್ರೀನಿವಾಸ್ ವಿ.ವಿ.ಯ ಸಿ.ಇ.ಒ ಡಾ. ನವೀನ್‌ಚಂದ್ರ ಶೆಟ್ಟಿ, ದೈವಾರಾಧನೆಯಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ. ಅಶೋಕ್ ಆಳ್ವ ಮತ್ತು ಸಮಾಜ ಸೇವೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕುಂದಾಪುರದ ಕೆಂಚನೂರು ಸೋಮಶೇಖರ ಶೆಟ್ಟಿ ಸನ್ಮಾನಿತರಾಗಲಿದ್ದಾರೆ ಎಂದರು.

    ಭಾಸ್ಕರ ರೈ ಸ್ಮರಣಾರ್ಥ ಶಿಕ್ಷಣ ಕ್ಷೇತ್ರದಲ್ಲಿ ಮ್ಯಾಪ್ಸ್ ಸಂಸ್ಥೆಯ ಅಧ್ಯಕ್ಷ ದಿನೇಶ್ ಆಳ್ವ, ಕೃಷಿಯಲ್ಲಿ ಸಿರಿಕುರಲ್ ಸಂಸ್ಥೆಯ ಮುರ ಸದಾಶಿವ ಶೆಟ್ಟಿ ಎಕ್ಕಾರು, ಕೃಷಿ ಸಂಶೋಧನೆಯಲ್ಲಿ ಕಾಸರಗೋಡಿನ ಕೃಷಿ ವಿಜ್ಞಾನ ಕೇಂದ್ರದ ತಜ್ಞೆ ಡಾ. ಸರಿತಾ ಹೆಗ್ಡೆ ಹಾಗೂ ಉತ್ಪಾದನಾ ಕ್ಷೇತ್ರದಲ್ಲಿ ಬೆಂಗಳೂರಿನ ತೇಜಾ ಇಕ್ವಿಪ್‌ಮೆಂಟ್ಸ್ನ ರವೀಂದ್ರನಾಥ ಮಾರ್ಲ ಅವರಿಗೆ ಗೌರವ ಸಲ್ಲಿಸಲಾಗುವುದು. ಕಲಾ ಕ್ಷೇತ್ರದಲ್ಲಿನ ಗಣನೀಯ ಸಾಧನೆಗಾಗಿ ಉಡುಪಿಯ ಯಕ್ಷಗಾನ ಮೇಳಗಳ ಸಂಚಾಲಕ ಪಿ. ಕಿಶನ್ ಹೆಗ್ಡೆ ಅವರಿಗೆ ಕೊಡಿಯಾಲ್‌ಗುತ್ತು ಸನ್ಮಾನ ಮಾಡಲಾಗುವುದು ಎಂದು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಹೇಮನಾಥ ಶೆಟ್ಟಿ ಕಾವು, ಕೋಶಾಧಿಕಾರಿ ಸಿ.ಎ. ರಾಮ್ ಮೋಹನ್ ರೈ, ಪ್ರಧಾನ ಕಾರ್ಯದರ್ಶಿ ಕೆ. ಎಮ್. ಶೆಟ್ಟಿ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 30, 2026

    ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    Local News May 29, 2026

    ಜೂನ್ 4, 13 : ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ವತಿಯಿಂದ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿ

    Local News May 28, 2026

    ಮಂಗಳೂರು : ಶ್ರೀ ಮಾತಾ ಅಮೃತಾನಂದಮಯಿ ದೇವಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ

    Local News May 27, 2026

    ಕದ್ರಿ ಪದವು ವಾರ್ಡಿನ ಕೊಪ್ಪಲಕಾಡು ಶಂಕರಭವನ ರಸ್ತೆಯ ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    Local News May 26, 2026

    ಮೇ 28-29 : ಏಳು ವರ್ಷಗಳ ಬಳಿಕ ಕರಾವಳಿ ಜಿಲ್ಲೆಗೆ ಅಮ್ಮ‘ಅಮೃತಸಂಗಮ 2026’

    Local News May 25, 2026

    ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Comments are closed.

    Demo
    Don't Miss
    Local News May 30, 2026

    ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    ಮಂಗಳೂರು,ಮೇ.30 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 37ನೇ ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ…

    ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

    May 29, 2026

    ಜೂನ್ 4, 13 : ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ವತಿಯಿಂದ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿ

    May 29, 2026

    ಮಂಗಳೂರು : ಶ್ರೀ ಮಾತಾ ಅಮೃತಾನಂದಮಯಿ ದೇವಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ

    May 28, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.