ಮಂಗಳೂರು, ಏ. 12 : ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಮುಳಿಹಿತ್ಲು ನಿವಾಸಿ ಗೋಪಾಲ್ (29) ಎಂದು ಗುರುತಿಸಲಾಗಿದೆ.
ಗೋಪಾಲ ಅವರು ಗುರುಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಅಪಘಾತದಲ್ಲಿ ಮತ್ತೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎಂದು ಹೇಳಲಾಗಿದೆ. ಸಂಚಾರ ಪೊಲೀಸರು ಪ್ರಕರಣವನ್ನು ದಾಖಲಿಸಿ,ತನಿಖೆ ನಡೆಸುತ್ತಿದ್ದಾರೆ.










