ಮಂಗಳೂರು, ಏ. 26 : : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 39ನೇ ಫಳ್ನೀರ್ ವಾರ್ಡಿನ ಗೋರಿಗುಡ್ಡ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಯು ರೂ. 88 ಲಕ್ಷ ವೆಚ್ಚದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು.
ನಂತರ ಮಾತನಾಡಿದ ಶಾಸಕರು, ವೆಲೆನ್ಸಿಯಾ ವೃತ್ತದಿಂದ ಗೋರಿಗುಡ್ಡಕ್ಕೆ ಹೋಗುವ ಈ ಭಾಗವು ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಈ ಕಾಮಗಾರಿಗಾಗಿ ಸ್ಥಳೀಯರು ಹಲವು ಬಾರಿ ಬೇಡಿಕೆಯಿಟ್ಟಿದ್ದರು. ಅದರಂತೆ ಅನುದಾನವನ್ನು ಹೊಂದಿಸಿಕೊಂಡು ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಅಜಿತ್ ಡಿಸಿಲ್ವ, ರಮೇಶ್ ಹೆಗ್ಡೆ, ಭರತ್ ಕುಮಾರ್, ರಾಮ್ ಪ್ರಸಾದ್, ಪ್ರವೀಣ್ ನಿಡ್ಡೇಲ್, ನವೀನ್ ಶೆಣೈ, ಗಣೇಶ್, ರೋಹಿದಾಸ್, ರತನ್,ಸಂದೀಪ್,ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.











