ಬೆಂಗಳೂರು, ಏ. 27 : ನಗರದ ನಂದಿನಿ ಲೇಔಟ್‌ನಲ್ಲಿ ರಾಜಕುಮಾರ್ ಸ್ಮಾರಕದ ಸಮೀಪದಲ್ಲಿರುವ ಬ್ಲೂ ಲೀಫ್ ಎಲ್‌ಇಡಿ ಗೋಡೌನ್‌ನಲ್ಲಿ ಮಧ್ಯರಾತ್ರಿ ಅಗ್ನಿ ಅವಘಡ ಸಂಭವಿಸಿದೆ.
ಬ್ಯಾನರ್‌ಗಳು ಮತ್ತು ಎಲ್‌ಇಡಿ ಸ್ಕ್ರೀನ್‌ಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಈ ಗೋಡೌನ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿ ದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಬೆಂಕಿಯ ತೀವ್ರತೆ ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಲೇಡಿಸ್ ಪಿಜಿ ಕಟ್ಟಡ ಹಾಗೂ ಸುತ್ತಮುತ್ತಲಿನ ಮನೆಗಳಿಗೂ ವ್ಯಾಪಿಸಿದೆ. ಈ ಘಟನೆಯಿಂದ ಕಟ್ಟಡಗಳಿಗೆ ಹಾನಿ ಸಂಭವಿಸಿದೆ. ಪಿಜಿಯಲ್ಲಿ ವಾಸವಿದ್ದ ಸುಮಾರು 50 ಮಹಿಳೆಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.











