ಮಂಗಳೂರು, ಏ. 29 : “ವಾದಿರಾಜ ವಾಲಗ ಮಂಡಳಿ” ಕನ್ನಡ ಸಿನೆಮಾ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಪ್ರಸ್ತುತ ಚಿತ್ರವು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸಂಕಲನ, ಹಿನ್ನೆಲೆ ಸಂಗೀತ ಹಾಗೂ ಡಬ್ಬಿಂಗ್ ಕೆಲಸಗಳು ಸಾಗುತ್ತಿವೆ ಎಂದು ಚಿತ್ರದ ನಿರ್ಮಾಪಕರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು,ಎಮ್.ಎನ್.ಆರ್. ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿದೆ. ಕಥೆ, ಚಿತ್ರಕತೆ ಹಾಗೂ ಸಂಭಾಷಣೆಯ ಜೊತೆಗೆ ನಿರ್ದೇಶನದ ಹೊಣೆಗಾರಿಕೆಯನ್ನು ಶಶಿರಾಜ್ ಕಾವೂರು ಅವರು ನಿರ್ವಹಿಸಿದ್ದಾರೆ. ಸುಮಾರು 50 ದಿನಗಳ ಕಾಲ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂದರು.
ಚಿತ್ರವು ಹಾಸ್ಯ, ಭಾವನೆ ಹಾಗೂ ಸಾಮಾಜಿಕ ಅಂಶಗಳ ನ್ನೊಳಗೊಂಡಿದೆ. ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಹೇಳಿದರು.
ನವೀನ್ ಡಿ. ಪಡೀಲ್, ಪ್ರಕಾಶ್ ತೂಮಿನಾಡು, ಮೈಮ್ ರಾಮದಾಸ್, ದೀಪಕ್ ರೈ ಪಾಣಾಜೆ ,ಶೋಭರಾಜ್ ಪಾವೂರು, ಚೇತನ್ ರೈ.ಮಾಣಿ, ಪುಷ್ಪರಾಜ್ ಬೊಳ್ಳಾರ್, ಗೋಪಿನಾಥ್ ಭಟ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ್ ವೇದಾಂತ ಮತ್ತು ಅಥರ್ವ ಪ್ರಕಾಶ್ ನಾಯಕ ನಟರಾಗಿ ಅಭಿನಯಿಸಿದ್ದು, ತನ್ವಿ ರಾವ್ ಹಾಗೂ ವೇನ್ಯ ರೈ ನಾಯಕಿಯರಾಗಿ ನಟಿಸಿದ್ದಾರೆ. ಲಕ್ಷ್ಮಣ ಕುಮಾರ್ ಮಲ್ಲೂರು ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ ಎಂದರು.
ಸಂಗೀತ ಸಂಯೋಜನೆಯನ್ನು ಮಣಿಕಾಂತ್ ಕದ್ರಿ ನೀಡಿದ್ದಾರೆ. ಸಾಹಸ ನಿರ್ದೇಶನವನ್ನು ಟೈಗರ್ ಶಿವು, ಛಾಯಾಗ್ರಹಣವನ್ನು ಎಸ್. ಚಂದ್ರಶೇಖರನ್ ನಿರ್ವಹಿಸಿದ್ದಾರೆ. ಜಯಪ್ರಕಾಶ್ ತುಂಬೆ ಸಹ ನಿರ್ಮಾಪಕರಾಗಿದ್ದು, ಸಂತೋಷ್ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜೇಶ್ ಕುಡ್ಡ ಹಾಗೂ ಕಾರ್ತಿಕ್ ಪ್ರೊಡಕ್ಷನ್ ಮ್ಯಾನೇಜರ್‌ಗಳಾಗಿ ಸಹಕರಿಸಿದ್ದಾರೆ. ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದರು..
ಪತ್ರಿಕಾಗೋಷ್ಠಿಯಲ್ಲಿ ವಾದಿರಾಜ ವಾಲಗ ಮಂಡಳಿ ಚಿತ್ರದ ನಿರ್ದೇಶಕ ಶಶಿರಾಜ್ ಕಾವೂರು, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕರು, ಮೇಘರಾಜ್, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ಸಹ ನಿರ್ದೇಶಕ ಜಯಪ್ರಕಾಶ್ ತುಂಬೆ, ನಟ ಅರ್ಜುನ್ ವೇದಾಂತ್, ವೇನ್ಯ ರೈ, ಮೈಮ್ ರಾಮದಾಸ್, ರಾಜೇಶ್ ಕುಡ್ಲ, ಶೋಭಾರಾಜ್ ಪಾವೂರು, ಅಕ್ಷತ ವಿಟ್ಲ, ಗೋಪಿನಾಥ್ ಭಟ್ , ಚೇತನ್ ರೈ ಮಾಣಿ ಮತ್ತಿತ್ತರರು ಉಪಸ್ಥಿತರಿದ್ದರು.











