ಕೋಲ್ಕತ್ತಾ, ಮೇ. 09 : ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಯ ಸುವೇಂದು ಅಧಿಕಾರಿ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುವೇಂದು ಅಧಿಕಾರಿ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಹಾಗೂ ಎನ್‌ಡಿಎ ಆಡಳಿತದ 20 ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.
ಸುವೇಂದು ಅಧಿಕಾರಿ ಅವರೊಂದಿಗೆ ಇತರ ಶಾಸಕರಾದ ದಿಲೀಪ್ ಘೋಷ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು, ಅಗ್ನಿಮಿತ್ರಾ ಪೌಲ್, ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧಿಸಿದರು.











