Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    September 11, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    September 10, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    September 11, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    September 10, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ
    Local News

    ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

    adminBy adminMay 12, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ 12 : ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಆಚರಿಸಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಅನಿಲ್ ಲೋಬೊ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ಸಂಸ್ಥಾಪಕರ ಕುಟುಂಬ ಸದಸ್ಯರು ದಿವಂಗತ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ಭಾವಚಿತ್ರಕ್ಕೆ ಪುಷ್ಪ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು.

    ಅಧ್ಯಕ್ಷರಾದ ಅನಿಲ್ ಲೋಬೊ ಅವರು ಸ್ವಾಗತ ಭಾಷಣದಲ್ಲಿ, ಸಂಸ್ಥಾಪಕರ ದೃಷ್ಟಿಕೋನ ಮತ್ತು ಧ್ಯೇಯವನ್ನು ಸ್ಮರಿಸುವ ಉದ್ದೇಶದಿಂದ ಸಂಸ್ಥಾಪಕರ ದಿನಾಚರಣೆಯನ್ನು ಪ್ರಾರಂಭಿಸಲಾಗಿದೆ.2018ರಲ್ಲಿ ಹೊಸ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ನಂತರ ಬ್ಯಾಂಕ್ ವೃತ್ತಿಪರತೆಯೊಂದಿಗೆ ಗಮನಾರ್ಹ ಬೆಳವಣಿಗೆ ಸಾಧಿಸಿದೆ.24 ವರ್ಷಗಳ ಬಳಿಕ ಶಾಖೆಗಳ ಸಂಖ್ಯೆ 16ರಿಂದ 21ಕ್ಕೆ ಏರಿಕೆಯಾಗಿದೆ.ಬ್ಯಾಂಕಿನ ಒಟ್ಟು ವ್ಯವಹಾರ ರೂ.500 ಕೋಟಿಯಿಂದ ರೂ.1,525 ಕೋಟಿಗೆ ಏರಿಕೆಯಾಗಿದ್ದು, ಠೇವಣಿಗಳು ರೂ.300 ಕೋಟಿಯಿಂದ ರೂ.875 ಕೋಟಿಗೆ ಹೆಚ್ಚಳವಾಗಿವೆ ಎಂದರು. ಬ್ಯಾಂಕ್ ರೂ.13 ಕೋಟಿ ಲಾಭ ದಾಖಲಿಸಿದೆ ಎಂದು ಹೇಳಿದರು.

    ವಂ. ಡಾ| ಪ್ರವೀಣ್ ಮಾರ್ಟಿಸ್ ಅವರು ತಮ್ಮ ಭಾಷಣದಲ್ಲಿ, ಅಧ್ಯಕ್ಷರಾದ ಅನಿಲ್ ಲೋಬೊ ಅವರ ನಾಯಕತ್ವವನ್ನು ಶ್ಲಾಘಿಸಿ, ಬ್ಯಾಂಕ್ ಕಳೆದ ಕೆಲವು ವರ್ಷಗಳಲ್ಲಿ ಸಾಧಿಸಿರುವ ಪರಿವರ್ತನೆಯನ್ನು ಮೆಚ್ಚಿದರು. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ನೆರವಾಗುವ “ವಿದ್ಯಾಧನ ವಿದ್ಯಾರ್ಥಿ ಕ್ರೆಡಿಟ್ ಯೋಜನೆ”ಯನ್ನು ವಿಶೇಷವಾಗಿ ಪ್ರಶಂಸಿಸಿದರು. ಎಂಸಿಸಿ ಬ್ಯಾಂಕ್ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸುವ ಜನಪರ ಬ್ಯಾಂಕಾಗಿ ಹೊರಹೊಮ್ಮಿದೆ ಎಂದರು.

    ಕಾರ್ಯಕ್ರಮದಲ್ಲಿ ಐಸಾಕ್ ವಾಸ್ ಅವರು ಸಂಪಾದಕರಾದ ಡಾ. ಜೆರಾಲ್ಡ್ ಪಿಂಟೊ ಅವರೊಂದಿಗೆ ಬ್ಯಾಂಕಿನ ಬುಲೆಟಿನ್ ಬಿಡುಗಡೆ ಮಾಡಿದರು. ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಹೊಸದಾಗಿ ಅರ್ಹತೆ ಪಡೆದ ಚಾರ್ಟರ್ಡ್ ಅಕೌಂಟೆಂಟ್ಸ್ ಗಳಾದ ಸಿಎ ಮ್ಯೂರಿಯಲ್ ಮಸ್ಕರೇನ್ಹಾಸ್ ಹಾಗೂ ಸಿಎ ಜಾಯ್ಸ್ಟನ್ ಡಿಸೋಜಾ ಅವರನ್ನು ಸನ್ಮಾನಿಸಲಾಯಿತು. ಕೇಂದ್ರ ಸೆಂಟ್ರಲ್ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಹೆನ್ರಿ ಮೆಂಡೋನ್ಕಾ (ಎಚ್.ಎಂ. ಪೆರ್ನಾಲ್), ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ರಿಶೆಲ್ ಫೆರ್ನಾಂಡಿಸ್ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ| ಜೋಸೆಫ್ ಲೋಬೊ, ಶ್ರೀ ಝೇವಿಯರ್ ಡಿಸೋಜಾ ಮತ್ತು ಶ್ರೀ ಪ್ರೇಮ್ ಜೆ. ಮೊರಾಸ್ ಅವರನ್ನು ಗೌರವಿಸಲಾಯಿತು.

    ನಿರ್ದೇಶಕರಾದ ರೋಶನ್ ಡಿಸೋಜಾ ಹಾಗೂ ಅನಿಲ್ ಪತ್ರಾವೊ ಅವರನ್ನು ಅವರ ಜನ್ಮದಿನದ ಅಂಗವಾಗಿ ಸನ್ಮಾನಿಸಲಾಯಿತು. ಬ್ಯಾಂಕಿನ ಹೊಸ ಲೋಗೋ ವಿನ್ಯಾಸಗೊಳಿಸಿದ ಬನ್ನು ಫೆರ್ನಾಂಡಿಸ್ ಹಾಗೂ ಪಿಎಫ್ಎಕ್ಸ್ ಮೆಮೋರಿಯಲ್ ಆಡಿಟೋರಿಯಂ ವಿನ್ಯಾಸಗೊಳಿಸಿದ ವಾಸ್ತುಶಿಲ್ಪಿ ದೀಪಕ್ ಡಿಸೋಜಾ ಅವರನ್ನು ಸಹ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ಇದರ ಉಪಕುಲಪತಿ ರೆವ್. ಡಾ. ಪ್ರವೀಣ್ ಮಾರ್ಟಿಸ್ ಎಸ್ ಜೆ ,ಕರ್ನಾಟಕ ಬ್ಯಾಂಕಿನ ಮಾಜಿ ಮಹಾಪ್ರಬಂಧಕ ಹಾಗೂ ಮುಖ್ಯ ಅನುಸರಣಾಧಿಕಾರಿ ಡಾ| ಮೀರಾ ಅರನ್ಹಾ, ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಅಧ್ಯಕ್ಷ ರಾಯ್ ಕ್ಯಾಸ್ಟೆಲಿನೋ ಹಾಗೂ ಕೆನರಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಐಸಾಕ್ ವಾಸ್ ಬ್ಯಾಂಕಿನ ಮಹಾಪ್ರಬಂಧಕರಾದ ಸುನಿಲ್ ಮಿನೇನೆಜಸ್, ನಿರ್ದೇಶಕರಾದ ಆಂಡ್ರೂ ಡಿಸೋಜಾ, ಹೆರಾಲ್ಡ್ ಮೊಂತೋರೊ, ಅನಿಲ್ ಪತ್ರಾವೊ, ಡೇವಿಡ್ ಡಿಸೋಜಾ, ಜೆ.ಪಿ. ರೋಡ್ರಿಗಸ್, ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸುಶಾಂತ್ ಸಾಲ್ದಾನ್ಹಾ, ಐರಿನ್ ರೆಬೆಲ್ಲೊ, ಆಲ್ವಿನ್ ಪಿ. ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಡಾ| ಜೆರಾಲ್ಡ್ ಪಿಂಟೊ ಹಾಗೂ ಸಿ.ಜಿ. ಪಿಂಟೊ ಉಪಸ್ಥಿತರಿದ್ದರು.

    ಕಾರ್ಯಕ್ರಮವು ಮನೋಜ್ ಲೋಪೆಸ್ ಮತ್ತು ತಂಡದವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಬ್ಯಾಂಕಿನ ಮಹಾಪ್ರಬಂಧಕರಾದ ಸುನಿಲ್ ಮೆನೆಜಸ್ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಜೇಸನ್ ಶಿರ್ತಾಡಿ ನಿರೂಪಿಸಿದರು.

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 11, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    Local News September 10, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    Local News September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    Local News September 9, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Local News September 8, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    Local News September 7, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    Comments are closed.

    Demo
    Don't Miss
    Local News September 11, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    ಮಂಗಳೂರು, ಸೆ.11 : ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಉತ್ಸವವನ್ನುಲೈಟ್‌ಹೌಸ್ ಹಿಲ್ ರೋಡ್ ಕ್ಯಾಂಪಸ್‌ನಲ್ಲಿ…

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    September 10, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 9, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.