ಮಂಗಳೂರು,ಮೇ.25 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 30ನೇ ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಬಳಿ ಲೋಕೋಪಯೋಗಿ ಇಲಾಖೆಯಿಂದ 30 ಲಕ್ಷ ರೂ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು.
ನಂತರ ಮಾತನಾಡಿದ ಶಾಸಕರು, ಈ ರಸ್ತೆ ಅಭಿವೃದ್ಧಿಯ ಅಗತ್ಯತೆ ಬಗ್ಗೆ ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರು ಹಾಗೂ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ರವರು ನಿರಂತರವಾಗಿ ಪ್ರಯತ್ನಿಸಿದ್ದರು. ಇದೀಗ ಅನುದಾನಗಳನ್ನು ಹೊಂದಿಸಿಕೊಂಡು ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಸ್ಥಳೀಯರಿಗೆ ಸಹಕಾರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಮ.ನ.ಪಾ ಸದಸ್ಯ ಮನೋಹರ್ ಶೆಟ್ಟಿ ಕದ್ರಿ, ಬೂತ್ ಅಧ್ಯಕ್ಷರಾದ ಸದಾಶಿವ, ಪ್ರವೀಣ್ ಭಟ್, ಜೀವನ್, ಜಯರಾಜ್ ಶೆಟ್ಟಿ, ವಾಸುದೇವ, ದೇವರಾಣಿ, ಕದ್ರಿ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.











