ಬೆಂಗಳೂರು, ಜೂ. 03 : ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಬುಧವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.
ಡಿ ಕೆ ಶಿವಕುಮಾರ್ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್, ಇತರ ಸಚಿವರಾಗಿ ಕೆ.ಎಚ್. ಮುನಿಯಪ್ಪ , ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದರು.











