ಬೆಂಗಳೂರು, ಜೂ. 04 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗಾಗಿ ತೆರವಾದ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.











