ಉಡುಪಿ, ,ಜೂ. 16 : ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾಗಿ , ರಸ್ತೆ ಮಧ್ಯೆ ಬಸ್ ಡಿವೈಡರ್‌ಗೆ ಡಿಕ್ಕಿಯಾದ ಸೋಮವಾರ ಬೆಳಗ್ಗೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲದ ಮಾಧವ ಕೃಪಾ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಬಸ್ ಚಾಲನೆಯಲ್ಲಿರುವಾಗಲೇ ಅಸ್ವಸ್ಥಗೊಂಡು ಅವರು ತಕ್ಷಣ ಬಸ್ಸನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದ್ದರು.
ಪರಿಸ್ಥಿತಿಯನ್ನು ಅರಿತ ಅವರು ಬಸ್ಸಿನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಆದರೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿ ಗಳು ಅಪಾಯದಿಂದ ಪಾರಗಿದ್ದಾರೆ ವಿದ್ಯಾರ್ಥಿಗಳಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ಸ್ಥಳೀಯ ನಿವಾಸಿಗಳು ಮತ್ತು ಶಾಲಾ ಸಿಬ್ಬಂದಿ ತಕ್ಷಣ ಚಾಲಕನಿಗೆ ಸಹಾಯ ಮಾಡಲು ಧಾವಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರು.











