ಬಂಟ್ವಾಳ, ಜು. 08 : ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ನರಹರಿ ಪರ್ವತದ ಸಮೀಪ, ಪಾಣೆಮಂಗಳೂರು-ಮೆಲ್ಕಾರ್ ನಡುವಿನ ರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮೃತರನ್ನು ಪುತ್ತೂರು ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ.
ಬಿ.ಸಿ. ರೋಡ್ ಕಡೆಗೆ ತೆರಳುತ್ತಿದ್ದ ಮಾರುತಿ ಕಾರಿಗೆ, ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಅಶೋಕ್ ಅವರು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೈಕ್ ಸವಾರ ಒನ್-ವೇ ನಿಯಮವನ್ನು ಉಲ್ಲಂಘಿಸಿ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.











