ಬೆಳ್ತಂಗಡಿ,ಜು. 09 : ಎರಡು ಕಾರುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದು, ಎರಡೂ ವಾಹನಗಳು ಜಖಂಗೊಂಡ ಘಟನೆ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಗಾಯಗೊಂಡವರನ್ನು ಮಂಗಳೂರು ಕಾವೂರು ಮೂಲದವರಾದ ವಿನಿತಾ (22), ಗೌರಮ್ಮ (49) ಮತ್ತು ಕೊಟ್ರೆಗೌಡ (55), ಯಾದಗಿರಿ ಜಿಲ್ಲೆಯ ಭೀಮಣ್ಣ (65), ಶ್ರೀನಿವಾಸ (32) ಮತ್ತು ಶಶಿಧರ (33) ಎಂದು ಗುರುತಿಸಲಾಗಿದೆ.
ಅಪಘಾತದ ನಡೆದ ಸ್ಟಳದಲ್ಲಿ ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.











