ಮಂಗಳೂರು, ಜು. 18 : ಅಂಬುರುಹ ಯಕ್ಷ ಕಲಾ ಕೇಂದ್ರ, ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಜುಲೈ 19ರಂದು ಮುಲ್ಲಕಾಡು, ಕಾವೂರು ಶ್ರೀ ಕೋಟದ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯಲಿದೆ ಎಂದು ಕಲಾ ಸಾರಥಿ ಕುಮಾರ್ ಮಾಲೆಮಾರ್ ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ಕುಣಿತ ಭಜನೆ, ಉಚಿತ ಜನಸೇವಾ ಶಿಬಿರ, ಮಕ್ಕಳಿಂದ ‘ಕೃಷ್ಣಲೀಲೆ’ ಯಕ್ಷಗಾನ ಹಾಗೂ ಸಂಜೆ ‘ಶಾಂಭವಿ ವಿಜಯ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅಂಬುರಹ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಆರ್ಥಿಕವಾಗಿ ಹಿಂದುಳಿದ ಎಂಟು ಬಡ ಕುಟುಂಬಗಳಿಗೆ ಉಚಿತ ದಿನಸಿ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಯಶೋಧ, ಹರಿಣಾಕ್ಷಿ, ಭಾರತಿ,ಮಹಾಲಕ್ಷ್ಮಿ, ಮೋಕ್ಷಿತ್ ಪೂಜಾರಿ ಹಾಗೂ ಜಾನ್ವಿ ಮಾಲೆಮಾರ್ ಉಪಸ್ಥಿತರಿದ್ದರು.











