ಬೆಳ್ತಂಗಡಿ, ಜು. 19 : ಮದ್ದಡ್ಕ ಸಮೀಪ ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ್ದು ಹಿಂಬದಿ ಸವಾರ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಮೃತರನ್ನು ಬಂಟ್ವಾಳದ ಕಾಲೇಜೊಂದರ ವಿದ್ಯಾರ್ಥಿ, ಬಳ್ಳಮಂಜ ನಿವಾಸಿ ಕೌಶಿಕ್ ಗೌಡ (19 ) ಎಂದು ಗುರುತಿಸಲಾಗಿದೆ.ಹಿಂಬದಿ ಸವಾರ ಮಡಂತ್ಯಾರಿನ ಭರತ್ (20) ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯರ ಪ್ರಕಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಚಲಿಸುತ್ತಿದ್ದ ವೇಳೆ ಸಂಪರ್ಕ ರಸ್ತೆಯಿಂದ ಸ್ಕೂಟಿ ಏಕಾಏಕಿ ಅಡ್ಡ ಬಂದಿರುವುದು ಅಪಘಾತಕ್ಕೆ ಕಾರಣ ಎಂದು ವರದಿಯಾಗಿದೆ
ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ, ತನಿಕೆ ನಡೆಸುತ್ತಿದ್ದಾರೆ.











