ನವದೆಹಲಿ, ಜು. 25 : ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಆಕ್ರೋಶ ಭುಗಿಲೆದ್ದ ಬೆನ್ನಲ್ಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಈ ವಿಚಾರವನ್ನು ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆʼ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ನಿರ್ಮಾಣವಾಗಿತ್ತು. ಈ ಬೆಳವಣಿಗೆಯ ನಡುವೆ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದಾರೆ.
ಸಿಜೆಪಿ ವಕ್ತಾರರು ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿ ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ ಬೇಡಿಕೆಯಾಗಿತ್ತು. ಸಂಧಾನ ಮಾತುಕತೆಯ ವೇಳೆ ಉಳಿದ ಎರಡು ಬೇಡಿಕೆಗಳಿಗೆ ಕೂಡಲೇ ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸಚಿವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಇಂದು (ಶನಿವಾರ) ಮಧ್ಯಾಹ್ನದವರೆಗೆ ಸಮಯ ಕೋರಿದ್ದರು. ಆದರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿ ದ್ದಾರೆ,











