ನವದೆಹಲಿ, ಜು. 26 : ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಷಿ ಅವರು ಭಾನುವಾರ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ಶಿಕ್ಷಣ ಇಲಾಖೆ ಖಾತೆಗೆ ಶನಿವಾರ ರಾಜೀನಾಮೆ ನೀಡಿದ್ದರು. ಬಳಿಕ ಪ್ರಹ್ಲಾದ್ ಜೋಷಿ ಅವರನ್ನು ನೂತನ ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು.
ನೂತನವಾಗಿ ನೇಮಕವಾಗಿರುವ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಷಿ ಅವರು ಇಲಾಖೆಯ ಅಧಿಕಾರವನ್ನು ಸ್ವೀಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಗ್ರಾಹಕರ ವ್ಯವಹಾರಗಳ ಖಾತೆಯ ಸಚಿವರಾಗಿರುವ ಪ್ರಹ್ಲಾದ್ ಜೋಷಿ ಅವರಿಗೆ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.











