ಉಡುಪಿ, ಜು. 30 : ಕಾಂಗ್ರೆಸ್ ಮತ್ತು ಕ್ರಾಕೋಚ್ ಜನತಾ ಪಾರ್ಟಿ ವಿರುದ್ಧ ನಗರದಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ನಡೆದಿದ್ದ ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜುಲೈ 29 ರ ಬುಧವಾರ ಸಂಜೆ, ಉಡುಪಿ ಪೊಲೀಸ್ ಠಾಣೆಯ ತನಿಖಾಧಿಕಾರಿ ಸುವರ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ನೋಟಿಸ್ ನೀಡಿದ್ದಾರೆ. ಶಾಸಕ ಯಶ್‌ಪಾಲ್ ಸುವರ್ಣ ಅವರು ನೋಟಿಸ್ ಸ್ವೀಕರಿಸಿದ್ದಾರೆ.
ನಗರದಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಯಶ್ ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ದ್ವೇಷ ಭಾಷಣ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.











