ಲಿಮಾ, ಆ. 02 : ಪೆರುವಿನ ನಾಜ್ಕಾ ನಗರದ ಹೊರ ವಲಯದಲ್ಲಿ ಪ್ರವಾಸಿಗರಿದ್ದ ವಿಮಾನವೊಂದು ಪತನಗೊಂಡು 13 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.
ಪೆರುವಿನ ನಾಝ್ಕಾ ಲೈನ್ಸ್ ವೀಕ್ಷಣೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸಣ್ಣ ವಿಮಾನ ಶನಿವಾರ ನಾಝ್ಕಾ ನಗರದ ಹೊರವಲಯದ ಪತನಗೊಂಡಿದೆ. ವಿಮಾನದಲ್ಲಿದ್ದ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಜಧಾನಿ ಲಿಮಾದಿಂದ ದಕ್ಷಿಣಕ್ಕೆ ಸುಮಾರು 240 ಕಿಲೋಮೀಟರ್ ದೂರದಲ್ಲಿರುವ ಪಿಸ್ಕೋ ವಿಮಾನ ನಿಲ್ದಾಣದಿಂದ ವಿಮಾನವು ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 11 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.











