ಬೆಂಗಳೂರು, ಆ. 05 : 19 ಶಾಸಕರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟ ಸಚಿವರಾಗಿ ಆ. 03, ಇಂದು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮೊದಲಿಗೆ ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಹೆಚ್.ಸಿ.ಬಾಲಕೃಷ್ಣ, ಕೆ.ಎಸ್.ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್, ಜಮೀರ್ ಅಹ್ಮದ್ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿದ್ದರು.ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ರೋಣ ಕ್ಷೇತ್ರದ ಜಿ.ಎಸ್.ಪಾಟೀಲ್ ಅವರ ಹೆಸರನ್ನು ಘೋಷಿಸಲಾಗಿದೆ. ಉಪಸಭಾಧ್ಯಕ್ಷ ಸ್ಥಾನಕ್ಕೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೆಸರನ್ನು ಅಂತಿಮಗೊಳಿಸಲಾಗಿದೆ. ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್, ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಪ್ರಕಟಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್, ಸೇರಿದಂತೆ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಿರಿಯ ನಾಯಕರು ಹಾಗೂ ವಿವಿಧ ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.











