ಮಂಗಳೂರು, ಆ. 14 : ಮಂಗಳೂರಿನ ಸಾಹಿತ್ಯ ಕೇಂದ್ರದ ವತಿಯಿಂದ ‘ಪುಸ್ತಕ ಹಬ್ಬ–2026’ ಅನ್ನು ಆಗಸ್ಟ್ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಸಂಘನಿಕೇತನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿ ಸಂಚಾಲಕ ಲತೇಶ್ ಬಾಕ್ರಬೈಲ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 16ರಂದು ಖ್ಯಾತ ಲೇಖಕ ಗಿರೀಶ್ ರಾವ್ ಹತ್ವಾರ್ (ಜೋಗಿ) ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಡಾ.ಮೋಹನ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಮೂರು ದಿನಗಳ ಕಾಲ ಕವಿಗೋಷ್ಠಿ, ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕ, ಯಕ್ಷಗಾನ ಹಾಗೂ ವಿಚಾರಗೋಷ್ಠಿಗಳು ನಡೆಯಲಿವೆ ಎಂದರು.
ಅದೇ ದಿನ ಪೂರ್ವಾಹ್ನ 11: 45ಕ್ಕೆ ಡಾ. ಧನಂಜಯ ಕುಂಬ್ಳೆ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ಮಧ್ಯಾಹ್ನ 2ರಿಂದ ವಿದ್ವಾನ್ ಮಹೇಶ್ ಪದ್ಯಾಣ ಬಳಗದಿಂದ ಶಾಸ್ತ್ರೀಯ ಸುಗಮ ಸಂಗೀತ, ಸಂಜೆ 3:30ರಿಂದ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ಸಾಂಸ್ಕೃತಿಕ ವೈಭವ, ಸಂಜೆ 5:30ರಿಂದ ಎಸ್.ಡಿ.ಎಂ. ರಂಗ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ಬೇಂದ್ರ ಆಂದ್ರೆ’ ನಾಟಕ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ಆ 17ರಂದು ಬೆಳಗ್ಗೆ 10 ರಿಂದ ಕಲಾಭಿ ಥಿಯೇಟರ್‌ಎಕ್ಸ್‌ಪ್ರೆಸ್ ಪ್ರಸ್ತುತಿಯಲ್ಲಿ ಅಜ್ಜಿ ಕಥೆಗಳು, ಮಧ್ಯಾಹ್ನ 2ರಿಂದ ಆಳ್ವಾಸ್ ವಿದ್ಯಾರ್ಥಿಗಳಿಂದ ಸಿಂಧೂರ ಸಂಗ್ರಾಮ ಯಕ್ಷಗಾನ ಪ್ರದರ್ಶನ, ಸಂಜೆ 5 ರಿಂದ ನಾಡಿನ ಖ್ಯಾತ ಅರ್ಥಧಾರಿಗಳಿಂದ ‘ಶ್ರವಣ ಭಕ್ತ ಪರೀಕ್ಷಿತ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಆ.18ರಂದು ಬೆಳಗ್ಗೆ 10:30ರಿಂದ ಡಾ.ಪಾದೇಕಲ್ಲು ವಿಷ್ಣು ಭಟ್ಟರ ಅಧ್ಯಕ್ಷತೆಯಲ್ಲಿ ಸಾಹಿತ್ಯ ಕಥನ ವಿಚಾರಗೋಷ್ಠಿ ನಡೆಯಲಿದೆ. ಭಾರತೀಯ ಮಹಾಕಾವ್ಯ ಮತ್ತು ಆಧುನಿಕ ಕನ್ನಡ ಸಾಹಿತ್ಯ ಬಗ್ಗೆ ಡಾ. ವೀಣಾ ಬನ್ನಂಜೆ, ಪ್ರಾಚೀನ ತುಳು ಕಾವ್ಯ ಪರಂಪರೆ ಮತ್ತು ಆಧುನಿಕ ತುಳು ಸಾಹಿತ್ಯ ಕುರಿತು ಶ್ರೀಕಾಂತ್ ಶೆಟ್ಟಿ ವಿಚಾರ ಮಂಡಿಸಲಿದ್ದಾರೆ. ಮಧ್ಯಾಹ್ನ 2ರಿಂದ ‘ಮೊಬೈಲ್ ಯುಗದಲ್ಲಿ ಪುಸ್ತಕ’ ಬಗ್ಗೆ ವಿದ್ಯಾರ್ಥಿ ಗೋಷ್ಠಿ ನಡೆಯಲಿದೆ. ಸಂಜೆ 6 ರಿಂದ ‘ಮಾರಿ ಕಾಡು ’ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.
ಪುಸ್ತಕ ಹಬ್ಬದಲ್ಲಿ ಬೃಹತ್ ಪುಸ್ತಕ ಪ್ರದರ್ಶನ ಮತ್ತು ಮಾರಾಟದ ಜೊತೆಗೆ ಖ್ಯಾತ ಕವಿಗಳು ಹಾಗೂ ಬರಹಗಾರರನ್ನು ಭೇಟಿ ಮಾಡುವ ಅವಕಾಶವೂ ಇರಲಿದೆ ಜತೆಗೆ ಮಕ್ಕಳಿಗೂ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯನ್ನು ಕಲ್ಪಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಾಹಿತ್ಯ ಕೇಂದ್ರದ ಟ್ರಸ್ಟಿಗಳಾದ ಪ್ರಕಾಶ್ ಪಿ., ಆಯೋಜನಾ ಸಮಿತಿಯ ಪ್ರಮುಖರಾಯದ ಅರವಿಂದ್, ಗಜಾನನ ಪೈ, ಕೆ.ರತ್ನಾಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.











