ಮಂಗಳೂರು, ಸೆ.09: ಮಂಗಳೂರಿನ ಕಲಾಸಾಧನ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದ ಸಂಭ್ರಮ ‘ರಾಗ ಸುಧಾ’ ನಡೆಯಿತು.
ಈ ಕಾರ್ಯಕ್ರಮವನ್ನು ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತಾಡಿ, ಸಂಗೀತದ ಮೂಲಕ ಮಾನಸಿಕ ನೆಮ್ಮದಿ ಹೊಂದಲು ಸಾಧ್ಯ. ಕಲಾಸಾಧನ ತಂಡದಿಂದ ರಾಮಕೃಷ್ಣ ಮಠದ ಪ್ರಶಾಂತ ಪರಿಸರ ದಲ್ಲಿ ರಾಗ ಸುಧಾ ಸಂಗೀತ ಸಂಭ್ರಮ ನಡೆಸಲು ಆಯ್ಕೆ ಮಾಡಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ದ.ಕ ಜಿಲ್ಲಾ ಉಪ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮ ರಡ್ಡಿ, ಅದಾನಿ ಸಮೂಹ ಸಂಸ್ಥೆ ಗಳ ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಹೃದ್ರೋಗ ತಜ್ಞ ಡಾ. ಮೋಹನ್ ಪೈ,,ಎಂ ಆರ್ ಪಿ ಎಲ್ ನಿವೃತ್ತ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ,ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರ ಅಧಿಕಾರಿ ಪ್ರಶಾಂತ್ ಪೈ, ಶಕ್ತಿನಗರದ ಶಕ್ತಿ ಕಾಲೇಜು ಆಡಳಿತಾಧಿಕಾರಿ ರಮೇಶ್,ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್,ಮಂಗಳೂರು ರೋಟರಿ ಸೆಂಟ್ರಲ್ ನ ನಿಕಟ ಪೂರ್ವ ಅಧ್ಯಕ್ಷ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.
ಕಲಾ ಸಾಧನ ಸಂಸ್ಥೆ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್ ಸ್ವಾಗತಿಸಿದರು. ಪಾಂಡುರಂಗ ಆಚಾರ್ಯ ವಂದಿಸಿದರು. ಶ್ರೀನಿವಾಸ್ ನಾಯಕ್ ಇಂದಾಜೆ ಕಾರ್ಯಕ್ರಮ ನಿರೂಪಿಸಿದರು.
ಹಿಂದೂಸ್ತಾನಿ ಗಾಯಕರಾದ ಪುಣೆಯ ಆದಿತ್ಯ ಮೋದಕ್ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಹಾರ್ಮೋನಿಯಂ ನಲ್ಲಿ ಯಲ್ಲಾಪುರದ ಸತೀಶ್ ಭಟ್ ಹೆಗ್ಗಾರ್, ತಬಲಾದಲ್ಲಿ ಬೆಂಗಳೂರಿನ ಅಕ್ಷಯ್ ಜೋಷಿ, ತಾನ್ಪುರದಲ್ಲಿ ಮಂಗಳೂರಿನ ಕಾರ್ತಿಕ್ ಹಾಗೂ ಪ್ರದಯ್ ಇದ್ದರು.











