ಮಂಗಳೂರು: ತುಳುವಿಗೆ ರಾಜ್ಯದ 2ನೇ ಭಾಷೆಯ ಮಾನ್ಯತೆ ನೀಡಬೇಕು ಎಂದು ಕರಾವಳಿಗರ ಬೇಡಿಕೆಯಾಗಿತ್ತು. ಇದೀಗ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ 2ನೇ ಭಾಷೆಯ ಮಾನ್ಯತೆ ನೀಡಲು ತೀರ್ಮಾನವನ್ನು ಕೈಗೊಳ್ಳಲಾಗಿದೆ. ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚಿಸಿ, ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದರು.
ಮೀನುಗಾರಿಕೆಗೆ, ಪ್ರವಾಸೋದ್ಯಮ ಕ್ಷೇತ್ರಕ್ಕೆ ಆದ್ಯತೆ ಮೂಲಸೌಕರ್ಯ ಅಭಿನೃದ್ದಿಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ , ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷಾದ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉಪಸ್ಥಿತರಿದ್ದರು.











