ಮಂಗಳೂರು, ಸೆ.30 : ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಇಂದು ಮಧ್ಯಾಹ್ನ 12:15ರ ಸುಮಾರಿಗೆ ಭಾರೀ ಸ್ಫೋಟ ಸಂಭವಿಸಿದೆ..
ಎಂಆರ್ ಪಿಎಲ್ ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಈ ಸ್ಫೋಟ ಉಂಟಾಗಿದೆ. ಸ್ಫೋಟದ ಬೆನ್ನಲ್ಲೇ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಸ್ಫೋಟದ ಶಬ್ದದಿಂದಾಗಿ ಜೋಕಟ್ಟೆ ಪಂಚಾಯತ್ ಕಟ್ಟಡ ಸಹಿತ ಸುತ್ತಮುತ್ತಲಿನ ಹಲವಾರು ಮನೆಗಳು ಕಂಪಸಿವೆ.
ಎಂಆರ್ ಪಿಎಲ್ ನಲ್ಲಿ ನಡೆದ ಭಾರೀ 8 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಪೇಜಾವರ ಚರ್ಚ್, ಸೇಂಟ್ ಜೋಸೆಫ್ ಕಾಳಾವರ ಚರ್ಚ್ ಜೋಕಟ್ಟೆ, ಜೋಕಟ್ಟೆ ಈದ್ಗಾ ಮಸೀದಿ, ಜೋಕಟ್ಟೆ ಮಸೀದಿ ಹಾಗು ಸ್ಥಳೀಯ ಹಲವು ಮನೆಗಳಿಗೆ ಹಾನಿಯಾಗಿದೆ. ಸ್ಫೋಟದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಮನೆಗಳು ಕಂಪಿಸಿದೆ.
ಎಂಆರ್ಪಿಎಲ್ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಇಂದು ಮಧ್ಯಾಹ್ನ 12:15ರ ಸುಮಾರಿಗೆ ಭಾರಿ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ.. ಭಾರೀ ಸ್ಫೋಟದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ರಾಜೇಶ್ ಬ್ಯಾಪ್ಟಿಸ್ಟ್ ಎಂಬುವರಿಗೆ 35 ಶೇ. ಸುಟ್ಟ ಗಾಯಗಳಾಗಿವೆ. ರಾಜೇಶ್ ಬ್ಯಾಪ್ಟಿಸ್ಟ್ ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನವ ಮಂಗಳೂರು ಬಂದರು, ಕದ್ರಿ, ಪಾಂಡೇಶ್ವರದ ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಈ ಬಗ್ಗೆ ನಾವು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಭಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಂಸದ ಕ್ಯಾಬ್ರಿಜೇಶ್ ಚೌಟ ಮತ್ತು ಪ್ರಮುಖ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಮುಲ್ಕಿ ಮೂಲದ 30 ವರ್ಷದ ಮನಿಶ್ ಕರ್ಕೆರ ಎಂದು ಗುರುತಿಸಲಾಗಿದೆ. ಮನಿಶ್ ಅವರು ಅಲ್ಲಿ ಗುತ್ತಿಗೆಯಾಧಾರದಡಿ ಕೆಲಸ ಕೆಲಸ ನಿರ್ವಹಿಸುತ್ತಿದ್ದರು ಎಂದು ವರದಿಯಾಗಿದೆ.











