ಬಂಟ್ವಾಳ, ಅ.01 : ಬಸ್ ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತರನ್ನು ಬಾಳ್ತಿಲ ನಿವಾಸಿ ಹರೀಶ್ ನಾಯ್ಕ್ (46) )ಎಂದು ಗುರುತಿಸಲಾಗಿದೆ
ಹರೀಶ್ ನಾಯ್ಕ್ ಅವರು, ದಾಸಕೋಡಿಯಲ್ಲಿ ಬಸ್ ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಸಂದರ್ಭ ಹಿಂಬದಿಯಿಂದ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.











