ಕಾರ್ಕಳ,ಅ.06 : ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಅಕ್ಟೋಬರ್ 4,ಭಾನುವಾರ ರಾತ್ರಿ ಕಾರ್ಕಳ ಬೈಪಾಸ್ ಬಳಿ ನಡೆದಿದೆ.
ಮೃತರನ್ನು ಸಾಣೂರಿನ ಕುಜುಮಾರ್ ಗುಡ್ಡೆ ನಿವಾಸಿ ವಿಘ್ನೇಶ್ ಆಚಾರ್ಯ (25) ಎಂದು ಗುರುತಿಸಲಾಗಿದೆ.
ಸಂಜೆ ಸುಮಾರು 7 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ವಿಘ್ನೇಶ್ ಅವರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಪ್ರಾಥಮಿಕ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.











