Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಅ.11-22 : ಮಂಗಳೂರು ದಸರಾ ಮಹೋತ್ಸವ ; 12 ರಂದು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    October 7, 2026

    ಕಾರ್ಕಳ : ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸಾವು

    October 6, 2026

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    October 5, 2026

    Subscribe to Updates

    Get the latest creative news from FooBar about art, design and business.

    What's Hot

    ಅ.11-22 : ಮಂಗಳೂರು ದಸರಾ ಮಹೋತ್ಸವ ; 12 ರಂದು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    October 7, 2026

    ಕಾರ್ಕಳ : ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸಾವು

    October 6, 2026

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    October 5, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಅ.11-22 : ಮಂಗಳೂರು ದಸರಾ ಮಹೋತ್ಸವ ; 12 ರಂದು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
    Local News

    ಅ.11-22 : ಮಂಗಳೂರು ದಸರಾ ಮಹೋತ್ಸವ ; 12 ರಂದು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    adminBy adminOctober 7, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಅ. 07 : ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅ. 11ರಿಂದ 22ರವರೆಗೆ ಅದ್ದೂರಿಯಾಗಿ ಜರುಗಲಿದೆ . ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಉತ್ಸವ ನಡೆಯಲಿದೆ ಎಂದು ಕೋಶಾಧಿಕಾರಿ ಪದ್ಮ ರಾಜ್ ಪೂಜಾರಿ ಅವರು ಕುದ್ರೋಳಿ ಕ್ಷೇತ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕ್ಷೇತ್ರದ ದರ್ಬಾರ್ ಹಾಲ್‌ನಲ್ಲಿ ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಜ್ಞಾನದಾಯಿನಿ ಶ್ರೀ ಶಾರದಾ ಮಾತೆಯ ನಯನಮನೋಹರ ಮೂರ್ತಿಗಳ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ ಆರಾಧನೆ ನೆರವೇರಿಸಲಾಗುತ್ತದೆ. ನವರಾತ್ರಿ ಹಿನ್ನೆಲೆಯಲ್ಲಿ ಭಜನೆ, ಸಂಗೀತ, ನೃತ್ಯ, ಕ್ರೀಡಾಕೂಟಗಳು ಹಾಗೂ ವಿವಿಧ ಜಾನಪದ ಕಲಾ ಪ್ರಕಾರಗಳ ಪ್ರದರ್ಶನ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

    ಅ.11ರಂದು ದಸರಾ ಮಹೋತ್ಸವದ ವೈದಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. ಅ.12ರಂದು ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ಸಿಗಲಿದೆ..ಉದ್ಘಾಟನಾ ಸಮಾರಂಭದಲ್ಲಿ ರಾಜ್ಯದ ವಿವಿಧ ಇಲಾಖೆಗಳ ಸಚಿವರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಅ.21ರಂದು ಸಂಜೆ 4 ಗಂಟೆಗೆ ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

    ಅ.12ರಿಂದ 20ರವರೆಗೆ ಪ್ರತಿದಿನ ಬೆಳಗ್ಗೆ 8.30ಕ್ಕೆ ಶ್ರೀಕ್ಷೇತ್ರದಲ್ಲಿ ಚಂಡಿಕಾಹೋಮ ನಡೆಯಲಿದೆ. ಅ.17ರಂದು ಸಾಮೂಹಿಕ ವಿಶೇಷ ಚಂಡಿಕಾಹೋಮ ಆಯೋಜಿಸಲಾಗಿದ್ದು, ಬೆಳಗ್ಗೆ 11.30ಕ್ಕೆ ಪೂರ್ಣಾಹುತಿ ನೆರವೇರಲಿದೆ. ಸಾರ್ವಜನಿಕರಿಗೂ ಚಂಡಿಕಾಹೋಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

    ಕ್ಷೇತ್ರದ ಸಂತೋಷಿ ಕಲಾಮಂಟಪದಲ್ಲಿ ಅ.11ರಿಂದ 20ರವರೆಗೆ ನಿತ್ಯ ಮಧ್ಯಾಹ್ನ 2.30ರಿಂದ ರಾತ್ರಿ 11.30ರ ವರೆಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಇರಲಿದೆ. ಇದೇ ವೇದಿಕೆಯಲ್ಲಿ ಪ್ರತಿದಿನವೂ ಸಮಾಜದ ಸಾಧಕ ಮಹಿಳೆಯರಿಗೆ ‘ಅಸಾಮಾನ್ಯ ಸ್ತ್ರೀ’ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

    ಈ ಬಾರಿಯ ದಸರಾ ಮಹೋತ್ಸವದಲ್ಲಿ ವೈವಿಧ್ಯಮಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅ.12ರಂದು ರಾಜ್ಯ ಮಟ್ಟದ ದಸರಾ ಕವಿಗೋಷ್ಠಿ, ಕಥೆ ಹಾಗೂ ಕವನ ಸ್ಪರ್ಧೆ, 13ರಂದು ಸಂಜೆ 7.30ರಿಂದ ’ರುದ್ರತಾಂಡವಮ್’ ರಾಜ್ಯಮಟ್ಟದ ಭಕ್ತಿಪ್ರಧಾನ ಸಮೂಹ ನೃತ್ಯ ಸ್ಪರ್ಧೆ ಸೀಸನ್-2 ನಡೆಯಲಿದೆ ಎಂದರು.

    15ರಂದು ಮಕ್ಕಳಿಗಾಗಿ ’ಮಕ್ಕಳ ದಸರಾ’ ಜರುಗಲಿದ್ದು, ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಮಕ್ಕಳಿಗೆ ಭಕ್ತಿಗೀತೆ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ದೇಶಭಕ್ತಿಗೀತೆ ಸ್ಪರ್ಧೆಗಳು ನಡೆಯಲಿವೆ. ಅ.16ರಂದು ’ಮುದ್ದು ಶಾರದೆ’ ಸ್ಪರ್ಧೆ, ಅ.18ರಂದು ದಸರಾ ಮ್ಯಾರಥಾನ್ ಎಡಿಷನ್-4, ’ಕಿನ್ನಿಪಿಲಿ’ ಸೀಸನ್-2 ಜರುಗಲಿವೆ. ಅ.20ರಂದು ಬೆಳಗ್ಗೆ 9 ಗಂಟೆಗೆ ಶಾರದಾ ಮಾತೆಯ ಮಡಿಲಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದು ಎಂದು ತಿಳಿಸಿದರು

    ಮಂಜೇಶ್ವರದ ಸೇವಾ ಸಂಸ್ಥೆ ಸ್ನೇಹಾಲಯ, ಹಿದಾಯ ಫೌಂಡೇಶನ್ ಮಂಗಳೂರು, ಸೇವಾಂಜಲಿ ಫರಂಗಿಪೇಟೆ ಸಂಸ್ಥೆ ಗಳನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಿ ಪುರಸ್ಕಾರ ನೀಡಲಾಗುವುದು ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಜೈರಾಜ್ ಹೆಚ್ ಸೋಮಸುಂದರಂ,ಕ್ಷೇತ್ರಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ,ಸದಸ್ಯರಾದ ಹರಿಕೃಷ್ಣ ಬಂಟ್ವಾಳ್, ಲೀಲಾಕ್ಷ ಕರ್ಕೇರಾ, ರಾಧಾಕೃಷ್ಣ ಮೊದಲಾದವರು ಉಪಸ್ಥಿ ತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 6, 2026

    ಕಾರ್ಕಳ : ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸಾವು

    Local News October 5, 2026

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Local News October 4, 2026

    ಪುತ್ತೂರು: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವು

    Local News October 2, 2026

    ಮಂಗಳೂರು : ಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ

    Local News October 1, 2026

    ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

    Local News September 30, 2026

    ಮಂಗಳೂರು : ಎಂಆರ್ ಪಿಎಲ್ ನಲ್ಲಿ ಭಾರೀ ಸ್ಫೋಟ, ಬೆಂಕಿ

    Comments are closed.

    Demo
    Don't Miss
    Local News October 7, 2026

    ಅ.11-22 : ಮಂಗಳೂರು ದಸರಾ ಮಹೋತ್ಸವ ; 12 ರಂದು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    ಮಂಗಳೂರು, ಅ. 07 : ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅ. 11ರಿಂದ…

    ಕಾರ್ಕಳ : ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸಾವು

    October 6, 2026

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    October 5, 2026

    ಪುತ್ತೂರು: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವು

    October 4, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.