ಮಂಗಳೂರು, ಅ.12 :ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ಐದನೇ ವರ್ಷದ “ಕುಡ್ಲದ ಪಿಲಿ ಪರ್ಬ-2026” ಇದರ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ತುಳುನಾಡಿನ ಸಂಸ್ಕ್ರತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಅಕ್ಟೋಬರ್ 18 ಭಾನುವಾರದಂದು ಐದನೇ ವರ್ಷದ ಪಿಲಿಪರ್ಬವು ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು. ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಯಶಸ್ಬಿಯಾಗಲಿ ಎಂದು ಶುಭ ಹಾರೈಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಯತೀಶ್ ಬೈಕಂಪಾಡಿ, ಕಮಲಾಕ್ಷ ಬಜಿಲಕೇರಿ, ಕಿರಣ್ ಶೆಣೈ, ನರೇಶ್ ಪ್ರಭು, ಜಗದೀಶ್ ಕದ್ರಿ, ಲಲಿತ್ ಮೆಂಡನ್ ಸೇರಿದಂತೆ ಪ್ರತಿಷ್ಠಾನದ ಇತರ ಪ್ರಮುಖರು ಉಪಸ್ಥಿತರಿದ್ದರು.











