ಮಂಗಳೂರು, ಅ.19 : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಕುಡ್ಲದ ಪಿಲಿಪರ್ಬ-2026 ಸೀಸನ್ 5 ರ ಉದ್ಘಾಟನಾ ಸಮಾರಂಭವು ಭಾನುವಾರ ನಡೆಯಿತು.

ಈ ವೇಳೆ ಮಾತನಾಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು, ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 11 ಹುಲಿವೇಷ ತಂಡಗಳಿಗಳಿಗೂ ಹಾಗೂ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಶುಭ ಹಾರೈಸದರು.
ಉದ್ಘಾಟನಾ ಸಮಾರಂಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಕಿರಣ್ ಶೆಣೈ, ಚೇತನ್ ಕಾಮತ್, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ, ನರೇಶ್ ಪ್ರಭು, ಸಹಾನ್ ಸೇರಿದಂತೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ನಿಕಟಪೂರ್ವ ಮ.ನ.ಪಾ ಸದಸ್ಯರು ಹಾಗೂ ಅನೇಕ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.











