ಮಂಗಳೂರು, ಅ.21 : ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರ 2/120 ಆಲಿಯಮ್ಮರವರ ಮನೆಯ ಬಳಿ ರೂ.6 ಲಕ್ಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ಇತ್ತೀಚೆಗೆ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಸ್ಥಳೀಯರ ಬೇಡಿಕೆಯಂತೆ ಈ ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದ್ದು ಕಾಮಗಾರಿ ವೇಳೆ ಸ್ಥಳೀಯರು ಸಹಕರಿಸುವಂತೆ ಮನವಿ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಶೇಖರ್ ಬಜಾಲ್, ಕಿರಣ್ ರೈ, ಸುಕೇಶ್ ಅಳಪೆ, ಪ್ರೀತೇಶ್, ಶೈಲೇಶ್, ಸೇರಿದಂತೆ ಪಕ್ಷದ ಪ್ರಮುಖರು, ವಾರ್ಡಿನ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.











