ಮಂಗಳೂರು,ನ.02 :ನಗರದ ನೆಹರೂ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ಧ್ವಜ ವಂದನೆ ಸ್ವೀಕರಿಸಿದರು. ಪೊಲೀಸ್ ಪಡೆ, ಎನ್ಸಿಸಿ ತಂಡ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
71ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಸಚಿವರಾದ ಯು.ಟಿ. ಖಾದರ್ ಅವರು ವಹಿಸಿದ್ದರು. ಕಾರ್ಯಕ್ರಮಲ್ಲಿ ಸಚಿವರು ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮಹತ್ವದ ಕುರಿತು ಮಾತಾಡಿದರು.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 120 ಸಾಧಕರಿಗೆ ಹಾಗೂ 53 ಸಂಘ-ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಪೊಲೀಸ್ ಪಡೆ, ಎನ್ಸಿಸಿ ತಂಡ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ನಡೆದ ಆಕರ್ಷಕ ಪಥಸಂಚಲನ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.











