Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ನ.20 : ‘ಬೆಲ್ಲದಗಟ್ಟಿ’ ತುಳು ಚಲನಚಿತ್ರ ಬಿಡುಗಡೆ

    November 14, 2026

    ಮಂಗಳೂರು : ನ.20ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಸಮಾರಂಭ

    November 13, 2026

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ : 230 ಗಂಟೆಗಳ ನಿರಂತರ ಮ್ಯಾರಥಾನ್ ಗಾಯನ ಪೂರ್ಣ- ಅಂತಿಮ ಘಟ್ಟ ತಲುಪಿದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ

    November 12, 2026

    Subscribe to Updates

    Get the latest creative news from FooBar about art, design and business.

    What's Hot

    ನ.20 : ‘ಬೆಲ್ಲದಗಟ್ಟಿ’ ತುಳು ಚಲನಚಿತ್ರ ಬಿಡುಗಡೆ

    November 14, 2026

    ಮಂಗಳೂರು : ನ.20ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಸಮಾರಂಭ

    November 13, 2026

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ : 230 ಗಂಟೆಗಳ ನಿರಂತರ ಮ್ಯಾರಥಾನ್ ಗಾಯನ ಪೂರ್ಣ- ಅಂತಿಮ ಘಟ್ಟ ತಲುಪಿದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ

    November 12, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು : ನ.20ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಸಮಾರಂಭ
    Local News

    ಮಂಗಳೂರು : ನ.20ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಸಮಾರಂಭ

    adminBy adminNovember 13, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ನ. 13: 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರಂಭವನ್ನು ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಎಸ್ ಸಿ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲಾಧಾರಿತ, ವೃತ್ತಿಪರ ಸೇವೆ’ ಎಂಬ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಪ್ತಾಹ ಆಚರಿಸಲಾಗುವುದು. ಈ ವರ್ಷದ ಸಪ್ತಾಹದಲ್ಲಿ ‘ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವ ಶಾಂತಿಗಾಗಿ ಸಹಕಾರ ಸಂಸ್ಥೆಗಳು’ ಎಂಬ ವಿಷಯದ ಕುರಿತು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

    ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ.. ಮಂಗಳೂರು, ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು/ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

    ರಾಜ್ಯ ಮಟ್ಟದ ಸಹಕಾರ ಸಪ್ತಾಹ ಆಚರಣೆಯ ಸಮಾರಂಭವನ್ನು ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸಲಿರುವರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರು ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಾಡಲಿರುವರು. ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನವನ್ನು ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷ ಜಿ.ಟಿ. ದೇವೇಗೌಡ ಇವರು ನೆರವೇರಿಸಲಿದ್ದಾರೆ. ಉತ್ತಮ ಸ್ವ-ಸಹಾಯ ಸಂಘಗಳಿಗೆ ಪುರಸ್ಕಾರವನ್ನು ಉಡುಪಿ/ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ. ವಸ್ತುಪ್ರದರ್ಶನ ಮಳಿಗೆಗಳ ಉದ್ಘಾಟನೆಯನ್ನು ಸಂಸದ ಬ್ರಿಜೇಶ್ ಚೌಟ ನೆರವೇರಿಸಲಿದ್ದಾರೆ. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ನೆರವೇರಿಸಲಿರುವರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್‌ ಅವರು ವಹಿಸಲಿರುವರು ಎಂದರು.

    ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಐವನ್ ಡಿ.ಸೋಜಾ, ಮಂಜುನಾಥ ಭಂಡಾರಿ, ಭರತ್ ಶೆಟ್ಟಿ, ಹಾಗೂ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಕರ್ನಾಟಕ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಇವರು ಭಾಗವಹಿಸಲಿರುವರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಇದರ ಅಧ್ಯಕ್ಷ ರವಿರಾಜ್ ಹೆಗ್ಡೆ ಇವರು ಗೌರವ ಉಪಸ್ಥಿತರಿರುವರು ಎಂದು ತಿಳಿಸಿದರು.

    ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ ಈ ಬಾರಿಯೂ 2025-26ರಲ್ಲಿ ಸರ್ವಾಂಗೀಣ ಪ್ರಗತಿಯನ್ನು ಸಾಧಿಸಿ ಆಯ್ಕೆಗೊಂಡ 4 ಸಹಕಾರಿ ಸಂಘಗಳಿಗೆ “ಸಹಕಾರ ಮಾಣಿಕ್ಯ ಪ್ರಶಸ್ತಿ”ಯ ಜೊತೆಗೆ 5 ಗ್ರಾಂ ಚಿನ್ನದ ಪದಕ, ರೂ.10,000/- ನಗದು ಹಾಗೂ ಪಾರಿತೋಷಕವನ್ನು ನೀಡಿ ಗೌರವಿಸಲಾಗುವುದು. ಸಮಾರಂಭದಲ್ಲಿ ಜಾ.ಕೆ.ಮಾಧವ ಗೌಡ,ಕೆ.ಪದ್ಮನಾಭ ಕೊಟ್ಟಾರಿ,ವಸಂತ್ ಬೆರ್ನಾಡ್,ಬೆಳ್ವೆ ಜಯರಾಮ ಶೆಟ್ಟಿ ಸೇರಿದಂತೆ ನಾಲ್ವರಿಗೆ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಹಕಾರಿಗಳಿಗೆ ಸಹಕಾರಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಅತ್ಯತ್ತಮ ಸ್ವ ಸಹಾಯ ಗಂಪುಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಶಶಿಕುಮಾರ್ ರೈ,ಜಯರಾಜ ರೈ, ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಮೊದಲಾದ ವರು ಉಪಸ್ಥಿತರಿದ್ದರು.

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Film News November 14, 2026

    ನ.20 : ‘ಬೆಲ್ಲದಗಟ್ಟಿ’ ತುಳು ಚಲನಚಿತ್ರ ಬಿಡುಗಡೆ

    Local News November 12, 2026

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ : 230 ಗಂಟೆಗಳ ನಿರಂತರ ಮ್ಯಾರಥಾನ್ ಗಾಯನ ಪೂರ್ಣ- ಅಂತಿಮ ಘಟ್ಟ ತಲುಪಿದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ

    Film News November 11, 2026

    ಅಶ್ವಿನಿ ಕೋಟ್ಯಾನ್ ನಿರ್ದೇಶನದಲ್ಲಿ ಹೊಸ ಚಿತ್ರ : ತುಳು – ಕನ್ನಡ ಚಿತ್ರರಂಗಕ್ಕೆ ಚಿತ್ರ ನಿರ್ಮಾಪಕರಾಗಿ ಪ್ರಕಾಶ್ ಕುಂಪಲ ಎಂಟ್ರಿ – ಅಶ್ವಿನಿ ಕೋಟ್ಯಾನ್

    Local News November 10, 2026

    ದೀಪಾವಳಿ ಸಂಭ್ರಮ : ನಂದನ್ ಮಲ್ಯ ಅವರ ಕುಟುಂಬವು ಪೌರಕಾರ್ಮಿಕರನ್ನು ಮನೆಗೆ ಆಹ್ವಾನಿಸಿ ಗೌರವ ಸಮರ್ಪಣೆ

    Local News November 9, 2026

    ಮಂಗಳೂರು : ಪಂಪ್ ವೆಲ್ ನಲ್ಲಿರುವ ಲೋಟಸ್ ಗ್ಯಾಲಕ್ಸಿ ಕಟ್ಟಡದಲ್ಲಿ ವಿಕೆ ಕೋಸ್ಟಲ್ ವೆಂಚರ್ಸ್ ಶುಭಾರಂಭ

    Local News November 8, 2026

    ಮಂಗಳೂರು : ‘ವಾದಿರಾಜ ವಾಲಗ ಮಂಡಳಿ’ ಚಿತ್ರದ ಪೋಸ್ಟರ್ ಬಿಡುಗಡೆ

    Comments are closed.

    Demo
    Don't Miss
    Film News November 14, 2026

    ನ.20 : ‘ಬೆಲ್ಲದಗಟ್ಟಿ’ ತುಳು ಚಲನಚಿತ್ರ ಬಿಡುಗಡೆ

    ಮಂಗಳೂರು, ನ. 14 : ರಾಜಾ ಕಟಪಾಡಿ ಅವರ ನಿರ್ದೇಶನದಲ್ಲಿ, ಕಟೀಲ್ ಪ್ರಸಾದ್ ಪ್ರೊಡಕ್ಷನ್ಸ್ ಕಟಪಾಡಿ ಲಾಂಛನದಲ್ಲಿ ನಿರ್ಮಾಣಗೊಂಡ ‘ಬೆಲ್ಲದಗಟ್ಟಿ’…

    ಮಂಗಳೂರು : ನ.20ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಸಮಾರಂಭ

    November 13, 2026

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ : 230 ಗಂಟೆಗಳ ನಿರಂತರ ಮ್ಯಾರಥಾನ್ ಗಾಯನ ಪೂರ್ಣ- ಅಂತಿಮ ಘಟ್ಟ ತಲುಪಿದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ

    November 12, 2026

    ಅಶ್ವಿನಿ ಕೋಟ್ಯಾನ್ ನಿರ್ದೇಶನದಲ್ಲಿ ಹೊಸ ಚಿತ್ರ : ತುಳು – ಕನ್ನಡ ಚಿತ್ರರಂಗಕ್ಕೆ ಚಿತ್ರ ನಿರ್ಮಾಪಕರಾಗಿ ಪ್ರಕಾಶ್ ಕುಂಪಲ ಎಂಟ್ರಿ – ಅಶ್ವಿನಿ ಕೋಟ್ಯಾನ್

    November 11, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.