ಮಂಗಳೂರು, ನ.25 : ಕದ್ರಿಯ ನೂಪುರ ನೃತ್ಯ ಮತ್ತು ಸಂಗೀತ ಅಕಾಡೆಮಿಯ 45ನೇ ವಾರ್ಷಿಕೋತ್ಸವದ ಅಂಗವಾಗಿ ‘ನೂಪುರ ಧ್ವನಿ-2026’ ಸಾಂಸ್ಕೃತಿಕ ನೃತ್ಯ ವೈಭವ ಹಾಗೂ ಸಂಗೀತ, ನೃತ್ಯ ಮತ್ತು ತಾಳವಾದ್ಯ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಕಲಾವಿದರ ಸನ್ಮಾನ ಕಾರ್ಯಕ್ರಮ ನ.28 ಮತ್ತು 29ರಂದು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎಲ್ಸಿಆರ್ಐ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ.ಪವಮಾನ್ ಪಿ.ಎಸ್. ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.28ರಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿರುವುದು. ಎಸ್.ಎಲ್. ಶೇಟ್ ಡೈಮಂಡ್ಸ್ ಹೌಸ್ನ ಮಾಲಕ ರವೀಂದ್ರ ಶೇಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ನೂಪುರದ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಹುಬ್ಬಳ್ಳಿಯ ವಿದ್ವಾನ್ ಸುಜಯ್ ಶಾನುಭೋಗ್ ಹಾಗೂ ಬೆಂಗಳೂರಿನ ವಿದುಷಿ ಗೌರಿ ಸಾಗರ್ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ ಎಂದರು.
ನ.29ರಂದು ಸಮಾರೋಪ ಸಮಾರಂಭ ನಡೆಯಲಿದೆ. ಶ್ರೀನಿವಾಸ ವಿಶ್ವವಿದ್ಯಾಲಯದ ಕಾರ್ಯದರ್ಶಿ ಹಾಗೂ ಆಡಳಿತ ಮಂಡಳಿ ಟ್ರಸ್ಟಿ ಎ. ಮಿತ್ರ ಎಸ್. ರಾವ್ ಮತ್ತು ಮಂಗಳೂರಿನ ಮಹತೋಭಾರ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಅರುಣ್ ಐತಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಕರ್ನಾಟಕ ಕಲಾಶ್ರೀ ಪುರಸ್ಕೃತೆ ವಿದುಷಿ ನಯನ ವಿ. ರೈ, ವಿದ್ವಾನ್ ಗಣೇಶ್ರಾಜ್ ಎಂ.ವಿ. ಹಾಗೂ ಡಾ.ಪಿ. ಶ್ರೀಧರ ಆಚಾರ್ಯ ಅವರಿಗೆ ‘ನೂಪುರ ಕಸ್ತೂರಿ’ ಬಿರುದು ನೀಡಿ ಗೌರವಿಸಲಾಗುವುದು. ಇದೇ ವೇಳೆ ಅಕಾಡೆಮಿಯ ವಾರ್ಷಿಕೋತ್ಸವದ ಸ್ಮರಣ ಸಂಚಿಕೆ ‘ನೂಪುರ ಸಿಂಚನ’ ಬಿಡುಗಡೆಗೊಳ್ಳಲಿದೆ ಎಂದರು.
ಕಾರ್ಯಕ್ರಮದಲ್ಲಿ ಉಡುಪಿಯ ವಿದುಷಿ ಶುಭಶ್ರೀ ಅಡಿಗ ಅವರಿಂದ ವೀಣಾ ವಾದನ ನಡೆಯಲಿದ್ದು, ನೂಪುರದ ವಿದ್ಯಾರ್ಥಿಗಳು ‘ಮಹಿಷಾಸುರ ಮರ್ದಿನಿ’ ನೃತ್ಯರೂಪಕವನ್ನು ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸುಧಾಕರ ರಾವ್ ಪೇಜಾವರ, ಸುಲೋಚನಾ ವಿ.ಭಟ್, ಪ್ರಶಾಂತ್,ಅನು ಉಪಸ್ಥಿತರಿದ್ದರು.











