ಮಂಗಳೂರು, ನ. 28 : ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ದ.ಕ. ಜಿಲ್ಲಾಡಳಿತದ ಆಶ್ರಯದಲ್ಲಿ ನ.30 ಮಂಗಳೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ನಿಗಮದ ಅಧ್ಯಕ್ಷೆ ಶಿವಕಾಂತಮ್ಮನಾಯಕ ಅವರು ಆಯೋಜಿಸಲಾ ಗಿರುವ ಉದ್ಯೋಗ ಮೇಳಕ್ಕೆ 360ಕ್ಕೂ ಅಧಿಕ ಕಂಪನಿಗಳು ಹಾಗೂ 10,697 ಅಭ್ಯರ್ಥಿಗಳು ಆನ್ಲೈನ್ನಲ್ಲಿ ನೋಂದಾಯಿಸಿದ್ದಾರೆ ಎಂದು ನಿಗಮದ ಅಧ್ಯಕ್ಷೆ ಶಿವಕಾಂತಮ್ಮನಾಯಕ ಗುರುವಾರ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.25ರ ಸಂಜೆಯವರೆಗಿನ ಮಾಹಿತಿಯ ಪ್ರಕಾರ ದ.ಕ. ಜಿಲ್ಲೆಯ 4540, ಉಡುಪಿಯಿಂದ 1200, ಮಂಡ್ಯದಿಂದ 358, ಉ.ಕ.ದಿಂದ 276 ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಯುವ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ನೋಂದಣಿ ಮಾಡಿಸಿ ಕೊಂಡಿದ್ದಾರೆ ಎಂದರು.
ರಾಜ್ಯದ ಕೈಗಾರಿಕಾ ಮತ್ತು ಸೇವಾ ವಲಯದ ಉದ್ದಿಮೆಗಳ ಮೂಲಕ ಕರ್ನಾಟಕದ ವಿದ್ಯಾವಂತ ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಈ ಮೇಳದ ಉದ್ದೇಶವಾಗಿದೆ. ಕಂಪನಿಗಳು ಸ್ಥಳದಲ್ಲೇ ಪ್ರಾಥಮಿಕ ಸಂದರ್ಶನ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ ಎಂದು ಅವರು ತಿಳಿಸಿದರು.
ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಜಿಲ್ಲಾಡಳಿತವು ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣ, ಕೆಎಸ್ಆರ್ಟಿಸಿ ಮತ್ತು ಮಂಗಳೂರು ರೈಲು ನಿಲ್ದಾಣದಿಂದ ಸೈಂಟ್ ಅಲೋಶಿಯಸ್ ಕಾಲೇಜಿನವರೆಗೆ ಫೀಡರ್ ಬಸ್ ಸೇವೆಗಳನ್ನು ವ್ಯವಸ್ಥೆಗೊಳಿಸಿದೆ. ಅಭ್ಯರ್ಥಿಗಳಿಗೆ ಮತ್ತು ಉದ್ಯೋಗದಾತರಿಗೆ ಉಚಿತ ಊಟ, ಕುಡಿಯುವ ನೀರು ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು.
ಕಪತ್ರಿಕಾಗೋಷ್ಠಿಯಲ್ಲಿ ರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಜಿ.ಪಂ. ಸಿಇಒ ನರ್ವಾಡೆ ವಿನಾಯಕ ಕರ್ಭಾರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ ಉಪಸ್ಥಿತರಿದ್ದರು.











