ನ್ಯೂಯಾರ್ಕ್ : ನ್ಯೂಯಾರ್ಕ್ನನಲ್ಲಿನ ಬಫಲೋದ ಸೂಪರ್ಮಾರ್ಕೆಟ್ ನಲ್ಲಿ. ದುಷ್ಕರ್ಮಿಯೊಬ್ಬ ರೈಫಲ್ನಿಂದ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 10 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಬಂದೂಕುಧಾರಿ ವ್ಯಕ್ತಿಯೊಬ್ಬ ಸುರಕ್ಷಾ ಕವಚ ಹಾಗೂ ಹೆಲ್ಮೆಟ್ ಧರಿಸಿ ಸೂಪರ್ ಮಾರ್ಕೆಟ್ ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿ 10 ಮಂದಿಯನ್ನು ಕೊಂದಿದ್ದಾನೆ. ಈ ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಏಕಾಏಕಿ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ ದಾಳಿ ಕೃತ್ಯವನ್ನು ಕ್ಯಾಮೆರಾದಲ್ಲಿ ಲೈವ್ ಸ್ಟ್ರೀಮ್ ಮಾಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.