ಕೊಪ್ಪಳ : ಇಂದಲ್ಲ ನಾಳೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ಬರಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕೊಪ್ಪಳದ ಕುಕನೂರಿನಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಣಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಸರ್ಕಾರ ಏನು ಹೇಳಿದೆ ಅದನ್ನೇ ಮಾಡಿದೆ. ದೇಶದ ಎಲ್ಲಾ ನಾಗರಿಕರಿಗೂ ಒಂದೇ ರೀತಿಯ ಕಾನೂನು ಇರಬೇಕು ಎಂಬುದು ಬಿಜೆಪಿಯ ನಿಲುವಾಗಿದೆ ಅದ್ದರಿಂದ ಇಂದಲ್ಲ ನಾಳೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ಬಂದೇ ಬರುತ್ತೆ ಎಂದು ಹೇಳಿದ್ದಾರೆ