ನವದೆಹಲಿ : ಭಾನುವಾರ ಮುಂಜಾನೆ ದೆಹಲಿಯ ಕೋರಲ್ ಬಾಗ್ನ ಗಫರ್ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. 39 ಅಗ್ನಿಶಾಮಕ ವಾಹನಗಳೊಂದಿಗೆ ಬೆಂಕಿಯನ್ನು ನಂದಿಸಲಾಯಿತು.
ಇಲ್ಲಿಯವರೆಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಬೆಂಕಿ ಅನಾಹುತಕ್ಕೆ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ದೆಹಲಿ ಅಗ್ನಿಶಾಮಕ ದಳದ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ