ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಹರೀಶ್ ಕೆ. ಎಂಬವವರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಹರೀಶ್ ಕೆ. ಎಂಬವರು ಬಂಧಿತ ಆರೋಪಿ. ಪೊಲೀಸ್ ಅಧಿಕಾರಿಯಾಗಿದ್ದುಕೊಂಡು, ಪಿಎಸ್ಐ ಅಭ್ಯರ್ಥಿಗಳು ಮತ್ತು ನೇಮಕಾತಿ ವಿಭಾಗದ ನಡುವೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಂಧಿತರು ನೀಡಿದ ಮಾಹಿತಿ ಆಧರಿಸಿ ಪಿಎಸ್ಐ ಹರೀಶ್ ಅವರನ್ನು ಬಂಧಿಸಲಾಗಿದ್ದು, ಕೋರ್ಟ್ ಗೆ ಹಾಜರುಪಡಿಸಲಾಗಿದೆ.
ಪಿಎಸ್ಐ ಪೊಲೀಸ್ ಪರೀಕ್ಷಾ ನೇಮಕಾತಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ದಿವ್ಯಾ ಹಾಗರಗಿ ಸೇರಿದಂತೆ ಹಲವರ ಬಂಧನ ಆಗಿದೆ. ಬೆಂಗಳೂರಿನಲ್ಲೇ ಹತ್ತಕ್ಕೂ ಹೆಚ್ಚು ಮಂದಿಯ ಬಂಧನವಾಗಿದೆ. ಇನ್ನಷ್ಟು ಮಂದಿಯ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.