ಮಂಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಗೆ ಬೆಂಕಿ ತಗುಲಿ ಶೋರೂಮ್ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಪಡೀಲ್ ಅಳಪೆ ಸಮೀಪದ ನಾಗುರಿ ಬಳಿ ಜೂ.23, ಶುಕ್ರವಾರದಂದು ನಡೆದಿದೆ.
ಈ ಘಟನೆ ಇಂದು ಬೆಳಗ್ಗೆ 8 ಗಂಟೆಗೆ ಶೋರೂಮ್ನಲ್ಲಿ ನಡೆದಿದೆ. ಅಗ್ನಿ ಅವಘಡದಿಂದ ಹಲವು ಸ್ಕೂಟರ್ಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ಮೌಲ್ಯದ ಸ್ಕೂಟರ್ ಗಳು ಬೆಂಕಿಗಾಹುತಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗ ಬೆಂಕಿ ನಂದಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.