ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಅಧ್ಯಕ್ಷ ಗೋಟಾಬಯ ವಿರುದ್ಧದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರು ರಾಜೀನಾಮೆ ನೀಡಿದ್ದಾರೆ.
ಟ್ವೀಟ್ ಮೂಲಕ ರನಿಲ್ ವಿಕ್ರಮ ಸಿಂಘೆ ರಾಜೀನಾಮೆಯನ್ನು ಧೃಡ ಪಡಿಸಿದ್ದಾರೆ. ಜನರ ಹಿತದೃಷ್ಟಿಯಿಂದ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ರಾಜಕೀಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ತಾವು ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.